ನವದೆಹಲಿ: ರಾಜಕೀಯ ರ್ಯಾಲಿಯಲ್ಲಿ ಭಾಗವಹಿಸಲು ವಾಯುಪಡೆಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಸೋಮವಾರ ಭಾರತದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಆಂಧ್ರಪ್ರದೇಶದ ಪಲ್ನಾಡಿನಲ್ಲಿ ಪ್ರಧಾನಿ ಮೋದಿಯವರ ರಾಜಕೀಯ ರ್ಯಾಲಿಯ ನಂತರ ಗೋಖಲೆ ಸೋಮವಾರ ಪ್ರಧಾನಿ ಮೋದಿ ವಿರುದ್ಧ ದಾಖಲಾದ ದೂರಿನ ಪ್ರತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ದೂರಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡ ಟಿಎಂಸಿ ಸಂಸದ, “ನಿನ್ನೆ ಆಂಧ್ರಪ್ರದೇಶದ ಪಲ್ನಾಡಿನ ಎಸಿ 96-ಚಿಲಕಲೂರಿಪೇಟೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅನ್ನು ಬಳಸಿದ್ದಕ್ಕಾಗಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ” ಎಂದು ಬರೆದಿದ್ದಾರೆ.