Friday, 18th October 2024

ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ವದೆಹಲಿ: ಉತ್ತರಾಖಂಡ, ಒರಿಸ್ಸಾ ಮತ್ತು ಮೇಘಾಲಯ ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಮೂವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಕೊಲಿಜಿಯಂ ತನ್ನ ನಿರ್ಣಯದಲ್ಲಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿ ರಿತು ಬಹ್ರಿ ಅವರನ್ನು ಉತ್ತರಾಖಂಡ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ.

ಪ್ರಸ್ತುತ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿರುವ ಜಸ್ಟಿಸ್ ಬಹ್ರಿ ಅವರು ಉನ್ನತ ಮಟ್ಟದ ಸಮಗ್ರತೆ, ನಡವಳಿಕೆ ಮತ್ತು ಚಾರಿತ್ರ್ಯವನ್ನು ಹೊಂದಿರುವ ಸಮರ್ಥ ನ್ಯಾಯಾೀಧಿಶರು ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಒಬ್ಬ ಮಹಿಳಾ ಮುಖ್ಯ ನ್ಯಾಯಾೀಧಿಶರಿದ್ದಾರೆ ಮತ್ತು ಅವರ ಉನ್ನತಿಯು ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿ ಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸುತ್ತದೆ. ಎಲ್ಲಾ ಸಂಬಂಧಿತ ಅಂಶಗಳನ್ನು ಪರಿಗಣಿಸಿ, ನ್ಯಾಯಮೂರ್ತಿ ರಿತು ಬಹ್ರಿ ಅವರು ಯೋಗ್ಯರಾಗಿದ್ದಾರೆ ಎಂದು ಕೊಲಿಜಿಯಂ ಪರಿಗಣಿಸಿದೆ ಮತ್ತು ಉತ್ತರಾಖಂಡದ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಯಾಗಿ ನೇಮಕಗೊಳ್ಳಲು ಎಲ್ಲಾ ರೀತಿಯಲ್ಲೂ ಸೂಕ್ತವಾಗಿದೆ ಎಂದು ಅದು ಸೇರಿಸಿದೆ.

ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ, ನ್ಯಾಯಮೂರ್ತಿ ಚಕ್ರಧಾರಿ ಶರಣ್ ಸಿಂಗ್ ಅವರನ್ನು ಒರಿಸ್ಸಾ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಶಿಫಾರಸು ಮಾಡಿದೆ.

ಕೊಲಿಜಿಯಂ ಮದ್ರಾಸ್ ಹೈಕೋರ್ಟ್‍ನ ನ್ಯಾಯಮೂರ್ತಿ ಎಸ್ ವೈದ್ಯನಾಥನ್ ಅವರನ್ನು ಮೇಘಾಲಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಶಿಫಾರಸು ಮಾಡಿದೆ.