Thursday, 12th December 2024

ವಾಣಿಜ್ಯ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆ

ನವದೆಹಲಿ: ಪೆಟ್ರೋಲಿಯಂ ಕಂಪನಿಗಳು ಮತ್ತೊಂದು ಶಾಕ್ ನೀಡಿವೆ. ಎಲ್ ಪಿ‌ ಜಿ ದರ ಹೆಚ್ಚಿಸಿವೆ. ವಾಣಿಜ್ಯ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿದೆ. ವಾಣಿಜ್ಯ ಸಿಲಿಂಡರ್‌ಗಳಲ್ಲಿ ಮಾತ್ರ ಹೆಚ್ಚಳವಾಗಿದ್ದು, ಗೃಹಬಳಕೆಯ ಎಲ್‌ ಪಿ ಜಿ ಸಿಲಿಂಡರ್‌ ಗಳ ಬೆಲೆಯಲ್ಲಿ ಬದಲಾವಣೆಯಾಗದಿರುವುದು ಸ್ವಲ್ಪ ಸಮಾಧಾನ ತಂದಿದೆ.

ವಾಣಿಜ್ಯ ಸಿಲಿಂಡರ್‌ ಬೆಲೆ ಹೆಚ್ಚಾಗಿರುವುದರಿಂದ ರೆಸ್ಟೋರೆಂಟ್‌ನ ಆಹಾರ ಮತ್ತು ಪಾನೀ ಯವು ದುಬಾರಿಯಾಗುವ ಸಾಧ್ಯತೆ ಯಿದೆ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 100 ರೂ. ಏರಿಕೆಯಾದ ನಂತರ, ದೇಶದ ರಾಜಧಾನಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 2101 ರೂ.ಗೆ ಏರಿದೆ. ಈ ಹಿಂದೆ ವಾಣಿಜ್ಯ ಎಲ್‌ ಪಿ ಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 266 ರೂಪಾಯಿ (ನವೆಂಬರ್ 1) ಗಳಷ್ಟು ಹೆಚ್ಚಿಸಲಾಗಿತ್ತು. ಆಗ ಗ್ಯಾಸ್ ಬೆಲೆ 2000.50 ರೂಪಾಯಿಯಾಗಿತ್ತು.

100 ಏರಿಕೆಯಾದ ನಂತರ ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2177 ರೂಪಾಯಿಗೆ ಏರಿಕೆಯಾಗಿದ್ದು, ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 2051 ರೂಪಾಯಿಯಾಗಿದೆ.

19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಸೆಪ್ಟೆಂಬರ್ 1 ರಂದು 43 ಮತ್ತು ಅಕ್ಟೋಬರ್ 1 ರಂದು 75 ರೂಪಾಯಿ ಹೆಚ್ಚಾಗಿತ್ತು.