ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯವಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೊಸ ಹಣಕಾಸು ವರ್ಷದ ಮೊದಲ ದಿನ ಪರಿಷ್ಕರಿಸುತ್ತವೆ.
ಕಳೆದ ತಿಂಗಳು ಕೇಂದ್ರವು 14.2 ಕೆಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ₹ 50 ಮತ್ತು ವಾಣಿಜ್ಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ₹ 350 ಹೆಚ್ಚಿಸಿತ್ತು. 2022ರಲ್ಲಿ ಮನೆಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ನಾಲ್ಕು ಬಾರಿ ಹೆಚ್ಚಿಸಲಾಗಿತ್ತು. ಈ ವರ್ಷದ ಜನವರಿಯಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ₹25 ಹೆಚ್ಚಿಸಲಾಯಿತು. ದೆಹಲಿಯಲ್ಲಿ ₹1,768 ಬೆಲೆ ಇತ್ತು.
ಮನೆಬಳಕೆ LPG ಸಿಲಿಂಡರ್‌ಗಳಿಗೆ ಹೋಲಿಸಿದರೆ, ವಾಣಿಜ್ಯ ಅನಿಲದ ದರಗಳು ಹೆಚ್ಚು ಏರಿಳಿತಗೊಳ್ಳುತ್ತವೆ. ಕಳೆದ ವರ್ಷ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ₹2,253ರಲ್ಲಿತ್ತು.
ಮಾರ್ಚ್‌ನಲ್ಲಿ, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಯೋಜನೆಯ 9.59 ಕೋಟಿ ಫಲಾನುಭವಿಗಳು ವಾರ್ಷಿಕವಾಗಿ ಪ್ರತಿ 14.2 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ ₹ 200 ಸಬ್ಸಿಡಿ ಪಡೆಯುತ್ತಾರೆ ಎಂದು ಹೇಳಿದ್ದರು.