ನವದೆಹಲಿ : ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ.
ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ 620, ಬಿಜೆಪಿ 548 ಮತ್ತು ಸ್ವತಂತ್ರ ಅಭ್ಯರ್ಥಿಗಳು 595 ಗೆಲುವು ಪಡೆದುಕೊಂಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ರಾಜಸ್ಥಾನದ 12 ಜಿಲ್ಲೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಏಳು ಅಭ್ಯರ್ಥಿಗಳು, ಸಿಪಿಐ ಮತ್ತು ಸಿಪಿಐ (ಎಂ) ತಲಾ ಇಬ್ಬರು ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ (ಆರ್ ಎಲ್ ಪಿ) ತಲಾ ಒಂದು ಅಭ್ಯರ್ಥಿಗಳು ಜಯಗಳಿಸಿದ್ದಾರೆ.
2,622 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. 14.32 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದರೆ, 7,249 ಅಭ್ಯರ್ಥಿಗಳು ಕಣದಲ್ಲಿದ್ದರು. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 20ರಂದು ಮತದಾನ ನಡೆಯಲಿದ್ದು, ಉಪಾ ಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 21ರಂದು ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.