Sunday, 13th October 2024

ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿ

ಲಕ್ನೋ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಹಾಪುರ್ ನಲ್ಲಿ ಘಟನೆ ಸಂಭವಿಸಿದೆ.

ಉತ್ತರ ಪ್ರದೇಶದ ರಾಂಪುರಕ್ಕೆ ಪ್ರಿಯಾಂಕಾ ಗಾಂಧಿ ಪ್ರಯಾಣಿಸುತ್ತಿದ್ದ ವೇಳೆ ಹಾಪುರ್ ನಲ್ಲಿ ಭದ್ರತಾ ಸಿಬ್ಬಂದಿ ವಾಹನಗಳ ಮಧ್ಯೆ ಡಿಕ್ಕಿ ಸಂಭ ವಿಸಿದ್ದು, ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಪ್ರಿಯಾಂಕಾ ಅವರು ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟ ರೈತ ನವರಿತ್ ಸಿಂಗ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ರಾಂಪುರಕ್ಕೆ ತೆರಳುತ್ತಿದ್ದರು.