Thursday, 12th December 2024

ಗೋವಾ: ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆ

ಪಣಜಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಒಂಭತ್ತು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸಚಿವರಾಗಿದ್ದ ಮೈಕೆಲ್ ಲೋಬೋ ಅವರು ಗೋವಾ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸುವ ಒಂದು ವಾರದ ಮೊದಲು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಬಿಜೆಪಿಯ ಮಾಜಿ ಸಚಿವ ಮೈಕಲ್ ಲೋಬೋ ಅವರು ಕಲಂಗುಟ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಸೇರುವ ವೇಳೆ ಮೈಕೆಲ್ ಲೋಬೋ, “ಬಿಜೆಪಿ ಸಾಮಾನ್ಯ ಜನರ ಪಕ್ಷವಲ್ಲ ಎಂದು ಮತದಾರರು ನನಗೆ ಹೇಳಿದ್ದಾರೆ. ಕಾಂಗ್ರೆಸ್ ಸಾಮಾನ್ಯ ಜನರಿ ಗಾಗಿ ಕೆಲಸ ಮಾಡುತ್ತಿದೆ. 25ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ, ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. 2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿರಲಿಲ್ಲ. 13 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು.

ಈ ಬಾರಿಯ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪೈಪೋಟಿ ಹೆಚ್ಚಾಗಿದೆ. ಬಿಜೆಪಿ, ಕಾಂಗ್ರೆಸ್, ಎನ್‌ಸಿಪಿ, ಗೋವಾ ಪ್ರಾದೇಶಿಕ ಪಕ್ಷಗಳ ಜೊತೆಗೆ ಎಎಪಿ ಮತ್ತು ಟಿಎಂಸಿ ಮೊದಲ ಬಾರಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ.