2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋತ ಬಳಿಕ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮತ್ತೆ ‘ಕೈ’ ಚುಕ್ಕಾಣಿ ಹಿಡಿಯಲು ರಾಹುಲ್ ಹೆಚ್ಚಿನ ಒಲವು ಹೊಂದಿಲ್ಲ. ಪಕ್ಷದ ಅಧ್ಯಕ್ಷರಾಗಿಲ್ಲದೆಯೇ ಬಿಜೆಪಿ ವಿರುದ್ಧ ಹೋರಾಟ ಮಾಡಬಹುದು ಎಂಬ ನಿಲುವನ್ನು ಹೊಂದಿದ್ದಾರೆ.
ಪಕ್ಷದ ಹಿರಿಯ ನಾಯಕರ ಮನವೊಲಿಕೆಗೆ ರಾಹುಲ್ ಮಣಿಯದೆ ಇದ್ದಲ್ಲಿ ಅಧ್ಯಕ್ಷ ಸ್ಥಾನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಪೈಕಿ ಒಬ್ಬರಿಗೆ ಒಲಿಯುವ ಸಾಧ್ಯತೆ ಇದೆ.
ಪಕ್ಷದೊಳಗೆ ಬಹುದೊಡ್ಡ ನಿರೀಕ್ಷೆ ಹುಟ್ಟು ಹಾಕಿರುವ ‘ಭಾರತ್ ಜೋಡೋ ಯಾತ್ರೆಗೆ ಕನ್ಯಾಕುಮಾರಿಯಲ್ಲಿ ಸೆಪ್ಟೆಂಬರ್ 7ಕ್ಕೆ ಚಾಲನೆ ಸಿಗಲಿದೆ. ಇದರಲ್ಲಿ ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.