ಚಂಡಿಗಡ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ನವಜೋತ್ ಸಿಂಗ್ ಸಿಧು ನೇತೃತ್ವದಲ್ಲಿ ಎದುರಿಸಲಿದ್ದೇವೆ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.
ಸಿಧು ಜನಪ್ರಿಯ ನಾಯಕರಾಗಿದ್ದಾರೆ. ಅವರ ನೇತೃತ್ವದಲ್ಲಿ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಯನ್ನು ಕಾಂಗ್ರೆಸ್ ಎದುರಿಸಲಿದೆ. ಈ ವಿಚಾರದ ಕುರಿತ ನಿರ್ಧಾರವನ್ನು ಕಾಂಗ್ರೆಸ್‌ನ ರಾಷ್ಟ್ರ ಘಟಕದ ಅಧ್ಯಕ್ಷರು ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ.
‘ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳ ಲಾಗಿದೆ. ಇದು ಪೂರ್ವ ನಿಯೋಜಿತವಾಗಿರಲಿಲ್ಲ’ ಎಂದೂ ರಾವತ್ ಹೇಳಿದ್ದಾರೆ.
ಚಮಕೌರ್ ಸಾಹಿಬ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಚನ್ನಿ ಮೂರು ಬಾರಿ ಶಾಸಕರಾಗಿ ಆಯ್ಕೆ ಯಾಗಿದ್ದಾರೆ. 2015-16ರಲ್ಲಿ ಚನ್ನಿ ಅವರು ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು.
ಮಾರ್ಚ್ 2017ರಲ್ಲಿ ಸಿಎಂ ಅಮರಿಂದರ್ ಸಿಂಗ್ ಸಂಪುಟಕ್ಕೆ ಸೇರುವ ಮೂಲಕ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾದರು. ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದರು.