ನವದೆಹಲಿ: ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ (Zakir Naik) ಅವರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಒಂದು ತಿಂಗಳ ಕಾಲ ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಬೋಧಕನನ್ನು ಪಾಕಿಸ್ತಾನ ಸನ್ಮಾನಿಸಿದ ರೀತಿಯನ್ನು ವಿದೇಶಾಂಗ ಸಚಿವಾಲಯ (ಎಂಇಎ) ಖಂಡಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.
ಝಾಕಿರ್ ನಾಯ್ಕ್ ಅವರನ್ನು ಪಾಕಿಸ್ತಾನದಲ್ಲಿ ಸ್ವಾಗತಿಸಲಾಗುತ್ತಿದೆ ಎಂಬ ವರದಿಗಳನ್ನು ನಾವು ನೋಡಿದ್ದೇವೆ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಮ್ಮ ಹೇಳಿದ್ದರು. “ಪಲಾಯನ ಮಾಡಿದ ಭಾರತೀಯನಿಗೆ ಪಾಕಿಸ್ತಾನದಲ್ಲಿ ಉನ್ನತ ಮಟ್ಟದ ಸ್ವಾಗತ ದೊರೆತಿರುವುದು ಆಶ್ಚರ್ಯವೇನಲ್ಲ. ಇದು ಖಂಡನೀಯ” ಎಂದು ಅವರು ಹೇಳಿದ್ದರು.
ಇದನ್ನೂ ಓದಿ: Salil Ankola : ಮಾಜಿ ಕ್ರಿಕೆಟಿಗ ಸಲೀಲ್ ಅಂಕೋಲಾ ತಾಯಿಯ ಮೃತ ದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ
ನಾಯಕ್ ಅವರ ಪಾಸ್‌ಪೋರ್ಟ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೈಸ್ವಾಲ್, ಅವರು ಪಾಕಿಸ್ತಾನಕ್ಕೆ ಯಾವ ಪಾಸ್‌ಪೋರ್ಟ್‌ನಲ್ಲಿ ಪ್ರಯಾಣಿಸಿದ್ದಾರೆ ಎಂಬುದು ಗೊತ್ತಿಲ್ಲ ಎಂದಿದ್ದಾರೆ.
ನಾಯಕ್ ಅವರ ಪಾಕಿಸ್ತಾನ ಭೇಟಿ
ಒಂದು ತಿಂಗಳ ಭೇಟಿಗಾಗಿ ಪಾಕಿಸ್ತಾನಕ್ಕೆ ಆಗಮಿಸಿದ ನಾಯಕ್‌ಗೆ ಅಲ್ಲಿ ಕೆಂಪುಹಾಸಿನ ಸ್ವಾಗತ ನೀಡಲಾಗಿತ್ತು. ಅವರು ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಉಪ ಪ್ರಧಾನಿ ಇಶಾಕ್ ದಾರ್ ಅವರನ್ನು ಭೇಟಿಯಾಗಿದ್ದಾರೆ. ನಾಯಕ್ ಇಸ್ಲಾಮಾಬಾದ್, ಕರಾಚಿ ಮತ್ತು ಲಾಹೋರ್ ಸೇರಿದಂತೆ ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಸರಣಿ ಸಾರ್ವಜನಿಕ ಭಾಷಣಗಳನ್ನು ಮಾಡಲಿದ್ದಾರೆ.
ಝಾಕಿರ್ ನಾಯ್ಕ್ ಯಾರು?
ಝಾಕಿರ್ ವಿರುದ್ಧ ಅಕ್ರಮ ಹಣವರ್ಗಾವಣೆ ಮತ್ತು ದ್ವೇಷ ಭಾಷಣಗಳ ಮೂಲಕ ಉಗ್ರವಾದ ಪ್ರಚೋದಿಸಿದ ಆರೋಪವಿದೆ. ಅವರ ಹಲವಾರು ಪ್ರಕರಣಗಳಿವೆ. ಹೀಗಾಗಿ ಭಾರತ ಬಿಟ್ಟು 2016ರಿಂದ ಮಲೇಷ್ಯಾದಲ್ಲಿ ನೆಲೆಸಿದ್ದಾರೆ. 2016ರ ಢಾಕಾ ಭಯೋತ್ಪಾದಕ ದಾಳಿ ಮಾಡಿದ್ದ ವ್ಯಕ್ತಿಯು ನಾಯಕ್ ಧರ್ಮೋಪದೇಶಗಳಿಂದ ಪ್ರಭಾವಿತನಾಗಿ ಮಾಡಿದ್ದೇನೆ ಎಂದು ಹೇಳಿದ್ದ.
ಝಾಕಿರ್ ನಾಯಕ್ ಅವರನ್ನು ಭಾರತಕ್ಕೆ ಒಪ್ಪಿಸಲಲು ಕೋರಲಾಗಿದ್ದರೂ ಮಲೇಷ್ಯಾ ಅದನ್ನು ಪರಿಗಣಿಸಿಲ್ಲ.