Sunday, 15th December 2024

ಕರೋನಾ ಬ್ರೇಕಿಂಗ್‌: 2,31,456 ಸೋಂಕಿತರು ಗುಣಮುಖ

#corona

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,32,788 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದೆ. ಈ ನಡುವೆ, ಕಳೆದ 24 ಗಂಟೆಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 3,207 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,35,102ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 17,93,645 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,61,79,085 ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ ಮಂಗಳವಾರ 20,19,773 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 35,00,57,330 ಜನರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಈವರೆಗೆ 21,85,46,667 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.