Wednesday, 11th December 2024

37,566 ಮಂದಿಗೆ ಸೋಂಕು ದೃಢ, ಚೇತರಿಕೆ ಪ್ರಮಾಣ ಶೇ.96.87

#covid

ನವದೆಹಲಿ: ಭಾರತದಲ್ಲಿ 102 ದಿನಗಳ ನಂತರ ಮೊದಲ ಬಾರಿಗೆ ಕರೋನಾ ವೈರಸ್ ಸೋಂಕಿತರ ಸಂಖ್ಯೆ ಇಳಿಕೆ ಕಂಡಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.96.87ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 37,566 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 907 ಮಂದಿ ಬಲಿಯಾ ಗಿದ್ದು, 56,994 ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಒಟ್ಟು 3,03,16,897 ಕರೋನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದುವರೆಗೂ 2,93,66,601 ಸೋಂಕಿತರು ಗುಣಮುಖ ರಾಗಿದ್ದು, 3,97,637 ಮಂದಿ ಬಲಿಯಾಗಿದ್ದಾರೆ. ಇದರ ಹೊರತಾಗಿ 5,52,659 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 17,68,008 ಜನರ ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೂ 40,81,39,287 ಜನರಿಗೆ ಸೋಂಕಿನ ತಪಾಸಣೆ ನಡೆಸಲಾಗಿದೆ.