ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮಂಗಳವಾರ 30,393 ಕರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 374 ಮಂದಿ ಮೃತಪಟ್ಟಿದ್ದಾರೆ.
ಕಳೆದ 4 ತಿಂಗಳಲ್ಲೇ ಕನಿಷ್ಠ ಪ್ರಮಾಣದ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ 45,254 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,03,53,710ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,06,130ಕ್ಕೆ ಇಳಿಕೆಯಾಗಿದೆ.