Sunday, 15th December 2024

ಕೊರೋನಾ ಅಬ್ಬರ: 81,466 ಹೊಸ ಪ್ರಕರಣಗಳು ಪತ್ತೆ

ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಒಂದೇ ದಿನದಲ್ಲಿ 81,466 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಅಕ್ಟೋಬರ್ 11 ರಂದು 24 ತಾಸಿನಲ್ಲಿ 74,383 ಪ್ರಕರಣಗಳು ದಾಖಲಾಗಿದ್ದವು. ನಂತರ ಇಷ್ಟೊಂದು ಪ್ರಕರಣಗಳು ಪತ್ತೆಯಾಗಿರುವುದು ಇದೇ ಮೊದಲು.

ಒಂದೇ ದಿನ 81,466 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,23,03,131ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಚೆ ಕೂಡ 1,63,396ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 50,356 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,15,25,039ಕ್ಕೆ ತಲುಪಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily