Saturday, 14th December 2024

ಕೊರೊನಾ ನೆಗೆಟಿವ್: ಮನೀಶ್ ಸಿಸೋಡಿಯಾ ಡಿಸ್ಚಾರ್ಜ್

ನವದಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಿಸೋಡಿಯಾ ಡೆಂಗ್ಯೂ ಹಾಗೂ ಕೊರೊನಾಗೆ ತುತ್ತಾಗಿದ್ದರು. ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಿಂದ ಮ್ಯಾಕ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.  ಸರ್ಕಾರಿ ಸ್ವಾಮ್ಯದ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಲ್ಲಿದ್ದ ಅವರನ್ನ ಈಗ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಐಸಿಯುನಲ್ಲಿಡಲಾಗಿತ್ತು.

ಸೆಪ್ಟೆಂಬರ್ 14ರಂದು ಮನೀಶ್ ಸಿಸೋಡಿಯಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಜ್ವರ ಹಾಗೂ ಉಸಿರಾಟದ ತೊಂದರೆ ಹೆಚ್ಚಾಗಿ ಸೆಪ್ಟೆಂಬರ್ 23ರಂದು ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿದ್ದರು.