Sunday, 15th December 2024

ಹೊಸ 45,903 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ: ಭಾರತದಲ್ಲಿ ಹೊಸದಾಗಿ 45,903 ಕೊರೊನಾ ಸೋಂಕಿತರು ಪತ್ತೆಯಾಗಿ, ಒಟ್ಟು ಸೋಂಕಿತರ ಸಂಖ್ಯೆ 85,53,657ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 490 ಮಂದಿ ಮೃತಪಟ್ಟಿದ್ದಾರೆ. 

79,17,373 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 48,405 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಭಾನುವಾರ 45,674 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 85,07,754ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಕಳೆದ 24 ಗಂಟೆಗಳ ಕೋವಿಡ್ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

ಕರ್ನಾಟಕದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 2,360 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು ಇಂದು 2,740 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 8,46,887ಕ್ಕೆ ಏರಿಕೆ ಯಾಗಿದೆ.

ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,579 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,49,327ಕ್ಕೆ ಏರಿಕೆಯಾಗಿದೆ.