Saturday, 14th December 2024

ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್’ಗೆ ಕೊರೊನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಈ ವಿಷ್ಯವನ್ನು ಖಚಿತಪಡಿಸಿದ್ದು, ಜನರು ಎಚ್ಚರ ವಾಗಿರುವಂತೆ ಟ್ವೀಟ್‌ನಲ್ಲಿ ಜನರಿಗೆ ಮನವಿ ಮಾಡಿದ್ದಾರೆ.

ನಾನು ಕೋವಿಡ್ -19 ಸೋಂಕಿಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ಸ್ವಯಂ-ಪ್ರತ್ಯೇಕಿಸಿ ಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇತ್ತೀಚೆಗೆ ಮುಕ್ತಾಯ ಗೊಂಡ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದರು ಪಾಲ್ಗೊಂಡಿದ್ದರು.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ಮೂಲಕ ಈ ವಿಷ್ಯವನ್ನು ಅವರು ತಿಳಿಸಿದ್ದರು. ಅವರಿಗೆ ರೋಗ ಲಕ್ಷಣವಿಲ್ಲ. ಅವರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಪತ್ನಿ ಉಷಾ ನಾಯ್ಡು ವರದಿ ನಕಾರಾತ್ಮಕವಾಗಿದೆ.