Saturday, 14th December 2024

ಸಚಿವ ಅಶ್ವಿನಿ ಕುಮಾರ್ ಚೌಬೆಗೆ ಕೊರೋನಾ ಸೋಂಕು ದೃಢ

ನವದೆಹಲಿ: ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

ಕೊರೋನಾ ವೈರಸ್ ಸೋಂಕಿನ ಆರಂಭಿಕ ಲಕ್ಷಣ ವ್ಯಕ್ತವಾದ ನಂತರ ಪರೀಕ್ಷೆಗೆ ಒಳಗಾಗಿದ್ದೇನೆ ಎಂದು ಚೌಬೆ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಅಲ್ಲದೆ ಇತ್ತೀಚೆಗೆ ಅವರೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕೆಂದು ಅವರು ಆಗ್ರಹಿಸಿ ದರು.

“ಕೊರೋನಾ ವೈರಸ್ ಸೋಂಕಿನ ಆರಂಭಿಕ ರೋಗಲಕ್ಷಣಗಳನ್ನು ಕಂಡುಕೊಂಡ ನಂತರ ನಾನು ಪರೀಕ್ಷೆ ಮಾಡಿದ್ದೇನೆ ಮತ್ತು ವರದಿ ಪಾಸಿಟಿವ್ ಆಗಿ ಬಂದಿದೆ. ನನ್ನ ಆರೋಗ್ಯವು ಉತ್ತಮವಾಗಿದೆ ಮತ್ತು ವೈದ್ಯರ ಸಲಹೆಯ ಮೇರೆಗೆ ನಾನು ಹೋಮ್ ಐಸೋಲೇಷನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ದಯವಿಟ್ಟು ತಮ್ಮನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿಕೊಳ್ಳಿ ಹಾಗೂ ಐಸೋಲೇಷನ್ ನಲ್ಲಿರಿ ಎಂದು ಹೇಳಿದರು.