ಪಾಟ್ನಾ: ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಟ್ವೀಟ್ ಮಾಡಿದ್ದಾರೆ.
ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ ಜ್ವರ ಬಂದಿತ್ತು. ಇದೀಗ ನಾನು ಸ್ಥಿರವಾಗಿದ್ದೇನೆ. ಪಾಟ್ನಾದ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯದಲ್ಲೇ ಚುನಾವಣಾ ಕ್ಯಾಂಪೇನ್ಗೆ ವಾಪಸ್ಸಾಗಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಅ. 28ರಿಂದ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಸುಶೀಲ್ ಕುಮಾರ್ ಮೋದಿ ಸಾಲು ಸಾಲು ಚುನಾ ವಣಾ ರ್ಯಾಲಿಗಳಲ್ಲಿ ಭಾಗಿಯಾಗಿದ್ದರು.