Friday, 13th December 2024

ಫಾರೂಕ್ ಅಬ್ದುಲ್ಲಾಗೆ ಕೊರೋನಾ ಸೋಂಕು

ಶ್ರೀನಗರ: ಹಿರಿಯ ರಾಜಕಾರಣಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ

ಟ್ವೀಟ್ ಮಾಡಿರುವ ಅವರ ಪುತ್ರ ಓಮರ್ ಅಬ್ದುಲ್ಲಾ, ವೈದ್ಯರ ಸಲಹೆಯ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರಿಗೆ ಮಂಗಳವಾರ ಕೊರೋನಾ ಪಾಸಿಟಿವ್ ಪತ್ತೆಯಾಗಿತ್ತು, ಹೀಗಾಗಿ ಅವರನ್ನು ಐಸೋಲೇಷನ್ ನಲ್ಲಿಡಲಾಗಿತ್ತು, ಆದರೆ ವೈದ್ಯರ ಸಲಹೆಯಂತೆ ಆಸ್ಪತ್ರೆದೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶೀಘ್ರ ಗುಣಮುಖವಾಗುವಂತೆ ಫಾರೂಕ್ ಅಬ್ದುಲ್ಲಾ ಅವರಿಗೆ ಹಾರೈಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily