ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.
ನನ್ನ ತಂದೆ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ದೃಢಪಟ್ಟಿದ್ದು, ಸಣ್ಣಪುಟ್ಟ ಲಕ್ಷಣಗಳು ಕಂಡು ಬಂದಿವೆ. ಪರೀಕ್ಷೆ ವರದಿ ಬವವರೆಗೂ ನಾನು ಮತ್ತು ನಮ್ಮ ಕುಟುಂಬದ ಎಲ್ಲಾ ಸದಸ್ಯರೂ ಐಸೋಲೇಷನ್ ನಲ್ಲಿ ಇರಲಿದ್ದೇವೆ. ನಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆಂದು ಹೇಳಿದ್ದಾರೆ.
ಕಳೆದ ಫೆಬ್ರವರಿ ತಿಂಗಳಿನಲ್ಲಿ ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರದಲ್ಲಿ ಕೊರೋನಾ ಲಸಿಕೆ ಪಡೆದುಕೊಂಡಿದ್ದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ