Friday, 13th December 2024

ಗುಲಾಮ್ ನಬಿ ಆಜಾದ್’ಗೆ ಕೊರೊನಾ ಸೋಂಕು ದೃಢ

#GhulamNabiAzad

ನವದೆಹಲಿ : ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಆಜಾದ್ ಇದೀಗ ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಕಾಂಗ್ರೆಸ್ ನಾಯಕರಾದ ಆಜಾದ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ಅವರೊಂದಿಗೆ ಸಂಪರ್ಕಕ್ಕೆ ಬಂದವರು ಸ್ವಯಂ ಸಂಪರ್ಕ ತಡೆ ಹಾಗು ಪರೀಕ್ಷೆಗಳನ್ನು ಮಾಡಿಸಿಕೊಳ್ಳುವಂತೆ ಹಾಗು ಕೊರೋನಾ ನೀತಿ ನಿಯಮ ಅನುಸರಿಸಲು ಮನವಿ ಮಾಡಿದ್ದಾರೆ.

ಕೋವಿಡ್ -19 ಗಾಗಿ ಧನಾತ್ಮಕ ವರದಿ ಪಡೆದಿದ್ದೇನೆ. ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್ ನಿಯಮಾವಳಿಯನ್ನು ಅನುಸರಿಸಿರಿ ಟ್ವೀಟ್ ನಲ್ಲಿ ಹೇಳಿದ್ದಾರೆ.