Saturday, 14th December 2024

ಕೊರೊನಾ ಸೋಂಕಿಗೆ ಬಿಜೆಪಿ ನಾಯಕ ದಿಲೀಪ್ ಕುಮಾರ್ ಗಾಂಧಿ ಬಲಿ

ನವದೆಹಲಿ : ಭಾರತದಲ್ಲಿ ಮತ್ತೆ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ದಿಲೀಪ್ ಕುಮಾರ್ ಗಾಂಧಿ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಗಾಂಧಿ ಅವರು ಅಹಮದಾನಗರ್ ಲೋಕಸಭಾ ಕ್ಷೇತ್ರದಿಂದ ಮೂರು ಆಯ್ಕೆಯಾಗಿದ್ದರು. ಒಂದು ಬಾರಿ ಕೇಂದ್ರದ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily