ಲಕ್ನೋ : ಹಿಂದೂಸ್ಥಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಕರೋನವೈರಸ್ ಸೋಂಕು ದೃಢವಾಗಿದೆ .
ಜಿತನ್ ರಾಮ್ ಮಾಂಝಿ ಅವರು ತಮ್ಮ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಪರೀಕ್ಷಾ ವರದಿಗಳು ಸೋಮವಾರ ಪಾಸಿಟಿವ್ ಎಂದು ಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಿತನ್ ರಾಮ್ ಮಾಂಝಿ, ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದು, ಪಾಸಿಟಿವ್ ಎಂದು ವರದಿ ಬಂದಿದೆ. ಕಳೆದ ಒಂದು ವಾರದಿಂದ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಬೇಕಾಗಿ ತಿಳಿಸಿದ್ದಾರೆ.