Sunday, 15th December 2024

ಶಶಿ ತರೂರ್‌’ಗೆ ಕರೋನಾ ಸೋಂಕು

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್‌’ಗೆ ಕರೋನಾ ಸೋಂಕು ತಗುಲಿದ್ದು, ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಏ.21 ರಂದು ಕರೋನಾ ಪಾಸಿಟಿವ್ ದೃಢಪಟ್ಟಿತ್ತು. ಅಂದಿನಿಂದ ಅವರು ಮನೆಯ ಲ್ಲಿಯೇ ಕ್ವಾರಂಟೈನ್ ಆಗಿದ್ದರು. ಕರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಶಿ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತದಲ್ಲಿ ಭಾನುವಾರ 3,49,691 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 2,767 ಜನರು ಸಾವನ್ನಪ್ಪಿದ್ದು, 2,17,113 ಜನರು ಡಿಸ್ಚಾರ್ಜ್ ಆಗಿದ್ದಾರೆ.