Sunday, 15th December 2024

ಅವಮಾನ, ಅಸಮಾಧಾನ…ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರಾಜೀನಾಮೆಗೆ ಕ್ಷಣಗಣನೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ಸಂಜೆ ಚಂಡೀಗಢದಲ್ಲಿ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿಗಳು ಸಂಜೆ ಪಂಜಾಬ್ ರಾಜ್ಯಪಾಲರನ್ನು ಭೇಟಿ ಮಾಡಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೂ ಮುನ್ನ, ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿ, ಪದೇ ಪದೇ ಅವಮಾನಕ್ಕೆ ಗುರಿಯಾಗಿರುವ ಬಗ್ಗೆ ತಮ್ಮ ದುಃಖ ಮತ್ತು ಅಸಮಾಧಾನ ವ್ಯಕ್ತಪ ಡಿಸಿದರು ಎಂದು ಮೂಲಗಳು ತಿಳಿಸಿವೆ.

ಮಧ್ಯಾಹ್ನ ಚಂಡೀಗಢದ ಅವರ ಅಧಿಕೃತ ನಿವಾಸದಲ್ಲಿ ಅವರ ಆಪ್ತ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಂಡೀಗಢದ ಪಂಜಾಬ್ ಕಾಂಗ್ರೆಸ್ ಕಚೇರಿಯಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಸಿಎಲ್ ಪಿ ಸಭೆಗೆ ಎ.ಐ.ಸಿ.ಸಿ. ತನ್ನ ಅಭಿಪ್ರಾಯ ನೀಡಿತು.

ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಬೇಕೆಂದು 50ಕ್ಕೂ ಹೆಚ್ಚು ಶಾಸಕರು ಪಕ್ಷದ ಹೈ ಕಮಾಂಡ್ ಗೆ ಪತ್ರ ಬರೆದ ನಂತರ ಈ ಬೆಳವಣಿಗೆ ನಡೆದಿದೆ. ರಾಜ್ಯದಲ್ಲಿ ಸುಮಾರು ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯಲಿದೆ.