ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿದೆ. ಶನಿವಾರ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,929 ಪ್ರಕರಣಗಳು ದೃಢಪಟ್ಟಿದ್ದು, 392 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಅಂಕಿಅಂಶಗಳು ತಿಳಿಸಿವೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ 46 ಸಾವಿರದ 950ರಲ್ಲಿದ್ದು, ಈ ನಡುವೆ 12,509 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,37,37,468ಕ್ಕೆ ತಲುಪಿದೆ. 6,70,847 ಮಂದಿಯನ್ನು ಕೊರೋನಾ ಪರೀಕ್ಷೆಗೊಳ ಪಡಿಸಲಾಗಿದ್ದು, 61,30,17,614 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ದೇಶದಲ್ಲಿ ಇದುವರೆಗೆ 61.39 ಕೋಟಿ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ.