Tuesday, 26th November 2024

2,628 ಕರೋನಾ ಸೋಂಕು ಪ್ರಕರಣ ದೃಢ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,628 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸಂಖ್ಯೆ 4,31,44,820ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,414ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ 19 ಸೋಂಕಿ ನಿಂದಾಗಿ 18 ಮಂದಿ ಮೃತಪಟ್ಟಿದ್ದಾರೆ. ದೇಶಾದ್ಯಂತ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,24,525ಕ್ಕೆ ಹೆಚ್ಚಳವಾಗಿದೆ.

ಒಂದೇ ದಿನದಲ್ಲಿ 443 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಕೋವಿಡ್ 19 ಸೋಂಕಿನಿಂದ ಒಟ್ಟು 4,26,04,881 ಮಂದಿ ಗುಣಮುಖರಾಗಿದ್ದಾರೆ. ಲಸಿಕೆ ಅಭಿಯಾನದಲ್ಲಿ ಈವರೆಗೆ 192.82 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.