ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 360 ಹೊಸ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,70,075ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,596ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,046ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 518 ಮಂದಿ ಗುಣಮುಖರಾಗುವು ದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,33,433ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 1,83,709 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,42,66,334 ಮಂದಿಯನ್ನು ಪರೀಕ್ಷೆಗೊಳ ಪಡಿಸಲಾಗಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,87,88,440 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.