Thursday, 12th December 2024

1,761 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 1,761 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 127 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,16,479ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 26,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,196 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ದೇಶದಲ್ಲಿ ಈವರೆಗೆ 1,81,21,11,675 ಡೋಸ್ ಲಸಿಕೆ ಹಾಕಲಾಗಿದೆ.