Sunday, 15th December 2024

11,793 ಕೋವಿಡ್ 19 ಪ್ರಕರಣ ದೃಢ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 11,793 ನೂತನ ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿವೆ.

ಇದರೊಂದಿಗೆ ದೇಶಾದ್ಯಂತ ಪ್ರಕರಣಗಳ ಒಟ್ಟು ಸಂಖ್ಯೆ 4,34,18,839ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾ ಲಯ ಮಂಗಳವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ 27 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ ನಿಂದ ಒಟ್ಟು 5,25,047 ಜನರು ಮೃತಪಟ್ಟಿ ದ್ದಾರೆ. 24 ಗಂಟೆಯಲ್ಲಿ ದೇಶದಲ್ಲಿ 2,280 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶಾದ್ಯಂತ ಕೋವಿಡ್ ಸೋಂಕಿನಿಂದ ಈವರೆಗೆ 4,27,97,092 ಜನರು ಗುಣಮುಖರಾಗಿ ದ್ದಾರೆ.