ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 44,111 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,05,02,362ಕ್ಕೆ ಏರಿಕೆಯಾಗಿದೆ.
738 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ ಸಂಖ್ಯೆ 4,01,050ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,95,533 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,96,05,779 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 57,477 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.