Thursday, 12th December 2024

80,834 ಜನರಲ್ಲಿ ಸೋಂಕು ಪತ್ತೆ, 2.80 ಲಕ್ಷ ಸೋಂಕಿತರು ಗುಣಮುಖ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು, ಎರಡನೇ ಅಲೆ ಬಳಿಕ  ಮೊದಲ ಬಾರಿಗೆ ಅತಿ ಕಡಿಮೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. 80,834 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,94,39,989ಕ್ಕೆ ಏರಿಕೆಯಾಗಿದೆ.

3,303 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 3,70,384ಕ್ಕೆ ಏರಿಕೆಯಾಗಿದೆ.

10,26,159 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,80,43,446 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.