Wednesday, 11th December 2024

16 ಸಾವಿರಕ್ಕೆ ತಗ್ಗಿದ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕರೋನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. 20 ಸಾವಿರ ಗಡಿ ದಾಟುತ್ತಿದ್ದ ಸೋಂಕಿತರ ಸಂಖ್ಯೆ ಸೋಮವಾರ 16 ಸಾವಿರಕ್ಕೆ ತಗ್ಗಿದೆ.

ಇದೇ ಅವಧಿಯಲ್ಲಿ 39 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 16,112 ಸೋಂಕಿ ತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,036,275ಕ್ಕೆ ಏರಿಕೆಯಾಗಿದೆ. ಇದುವರೆಗೂ 43,365,890 ಸೋಂಕಿತರು ಗುಣಮುಖರಾಗಿದ್ದು, 526,396 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿ ದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 143,989ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 3,96,424 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸ ಲಾಗಿದೆ. ದೇಶದಲ್ಲಿ ಇದುವರೆಗೂ 87,52,07,621 ಜನರಿಗೆ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆ ಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 8,34,167 ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 204,34,03,676 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ.