Wednesday, 11th December 2024

ದೆಹಲಿ ಸಚಿವರಿಗೆ ಕೊರೋನಾ ವೈರಸ್ ಸೋಂಕು ದೃಢ

ನವದೆಹಲಿ; ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಗುರುವಾರ ವರದಿಯಾಗಿದೆ.

ಕೊರೋನಾ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನ.19 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸರ್ವಪಕ್ಷ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಗೋಪಾಲ್ ರಾಯ್ ಪಾಲ್ಗೊಂಡಿರಲಿಲ್ಲ.

ಜ್ವರ ಹಾಗೂ ಕೊರೋನಾ ಸೋಂಕು ತಗುಲಿದ ಸೋಂಕುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಯ್ ಅವರು ಕೊರೋನಾ ಪರೀಕ್ಷೆಗೊಳಗಾಗಿದ್ದು, ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ತಮಗೆ ಸೋಂಕು ತಗುಲಿರುವುದನ್ನು ಸ್ವತಃ ಗೋಪಾಲ್ ಅವರೇ ತಿಳಿಸಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.