ಲಖನೌ : ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅಖಿಲೇಶ್, ನನ್ನ ಕರೋನಾ ಪರೀಕ್ಷಾ ವರದಿ ಈಗಷ್ಟೇ ಬಂದಿದ್ದು, ನನಗೆ ಕರೋ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಅಖಿಲೇಶ್ ಯಾದವ್ ಇತ್ತೀಚೆಗಷ್ಟೇ, ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವುದಿಲ್ಲ. ಬಿಜೆಪಿಯ ಲಸಿಕೆಯನ್ನು ನಾನು ನಂಬೋ ದಾದ್ರೂ ಹೇಗೆ? ಬಿಜೆಪಿಯ ಲಸಿಕೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ