ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಅಣ್ಣಾಮಲೈ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಸ್ವತಃ ಅಣ್ಣಾಮಲೈ ಅವರೇ ಟ್ವಿಟ್ಟರ್ ಮೂಲಕ ಕೋವಿಡ್ ಪಾಸಿಟಿವ್ ಆಗಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮತ್ತು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದರು. ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿದ್ದು, ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ