Sunday, 15th December 2024

ಸೆ.30 ರವರೆಗೆ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ವಿಸ್ತರಣೆ

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಸೆ.30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ.

ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು ಮತ್ತು ಆರೋಗ್ಯ ಮತ್ತು ನೈರ್ಮಲ್ಯ ಪ್ರೋಟೋ ಕಾಲ್‌ಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಲಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ, ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಅರ್ಧದಷ್ಟು ನೌಕರರೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿದೆ.

“ಆರೋಗ್ಯ ಸೇವೆಗಳು, ಕಾನೂನು ಮತ್ತು ಸುವ್ಯವಸ್ಥೆ, ಕೃಷಿ ಉತ್ಪನ್ನಗಳು ಮತ್ತು ಇತರ ತುರ್ತು ಸೇವೆಗಳು ಸೇರಿದಂತೆ ಅಗತ್ಯ ಸೇವೆ ಹೊರತುಪಡಿಸಿ ಜನರು ಮತ್ತು ವಾಹನಗಳ ಸಂಚಾರ ಸೇರಿದಂತೆ ಎಲ್ಲಾ ಹೊರಾಂಗಣ ಚಟುವಟಿಕೆಗಳನ್ನು ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ರಾಜ್ಯ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಜಿಲ್ಲಾಡಳಿತಗಳು, ಪೊಲೀಸ್ ಆಯುಕ್ತರು ಮತ್ತು ಸ್ಥಳೀಯ ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದೆ.