ನವದೆಹಲಿ: ದೇಶದಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದು ಕೊಂಡಿರುವ ಬೆನ್ನಲ್ಲೆ ಕುಂಭ ಮೇಳಕ್ಕೆ ಆಗಮಿಸುವ ಭಕ್ತರು ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಲೇಬೇಕು ಎಂದು ಉತ್ತರಾಖಂಡ ಹೈಕೋರ್ಟ್ ಆದೇಶ ನೀಡಿದೆ.
ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಈ ಕುರಿತಾಗಿ ಆದೇಶ ಹೊರಡಿದ್ದು ಏಪ್ರಿಲ್ 1 ರಂದು ನಡೆಯಲಿರುವ ಕುಂಭ ಮೇಳ ಸಮಯದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸುವ ಭಕ್ತರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿ ನೆಗೆಟೀವ್ ವರದಿಯೊಂದಿಗೆ ಆಗಮಿಸಬೇಕು ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ