Saturday, 23rd November 2024

ಪ್ರಿಯಾಂಕಾ ಗಾಂಧಿ ವಾದ್ರಾಗೆ ಕರೋನಾ ದೃಢ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೊಮ್ಮೆ ಕರೋನಾ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಪ್ರಿಯಾಂಕಾ ಮಾಹಿತಿ ನೀಡಿದ್ದಾರೆ.

ನನಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ.

ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಜೂನ್ 3ರಂದು ಪ್ರಿಯಾಂಕಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಕೋವಿಡ್ ನ ಸೌಮ್ಯ ಲಕ್ಷಣಗಳು ಇದ್ದ ಕಾರಣ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಇದೀಗ ಅವರಲ್ಲಿ ಮತ್ತೊಮ್ಮೆ ಕೊರೊನಾ ಸೋಂಕು ಕಾಣಿಸಿ ಕೊಂಡಿದ್ದು, ತಮ್ಮ ಜೊತೆ ಸಂಪರ್ಕಕ್ಕೆ ಬಂದವರು ತಕ್ಷಣ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.