ನವದೆಹಲಿ : ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ನನಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಇರುವುದು ತಿಳಿದುಬಂದಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳಬೇಕಾಗಿ ಒತ್ತಾಯಿಸುತ್ತೇನೆ ಎಂದು ಜೈಶಂಕರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಜೈಶಂಕರ್ ಅವರು ಫ್ರಾನ್ಸ್’ನಲ್ಲಿ ಭಾರತಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚಿಸಲು ಫ್ರೆಂಚ್ ಕೌಂಟರ್‍ಪಾರ್ಟ್ ಜೀನ್-ಯ್ವೆಸ್ ಲೆ ಡ್ರಿಯನ್ ಅವರನ್ನು ಭೇಟಿ ಮಾಡಿದ್ದರು.
ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ಜೈಶಂಕರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.