ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಮುಂಬೈ ಒಂದರಲ್ಲೇ 172ಕ್ಕೂ ಹೆಚ್ಚು ಪ್ರಕರಣಗಳು ಹೊಸದಾಗಿ ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,488 ಕ್ಕೆ ತಲುಪಿದೆ.
ಪುಣೆ ಜಿಲ್ಲೆಯಲ್ಲಿ 766 ಪ್ರಕರಣಗಳು ಮತ್ತು ಥಾಣೆ ಜಿಲ್ಲೆಯಲ್ಲಿ 616 ಪ್ರಕರಣಗಳು ವರದಿಯಾಗಿವೆ.
ಮಹಾರಾಷ್ಟ್ರದಲ್ಲಿ ಈಗಾಗಲೇ ಪಾಸಿಟಿವ್ ಕೋವಿಡ್ನ ಶೇಕಡಾವಾರು 9.4 ತಲುಪಿದೆ. ಕಳೆದ 24 ಗಂಟೆಗಳಲ್ಲಿ 395 ಕರೊನಾ ಸೋಂಕಿತರನ್ನು ಆಸ್ಪತ್ರೆ ಯಿಂದ ಬಿಡುಗಡೆ ಮಾಡಲಾಗಿದೆ.
ಫೋರ್ಟಿಸ್ ಆಸ್ಪತ್ರೆ ಮುಲುಂಡ್ನ ಕ್ರಿಟಿಕಲ್ ಕೇರ್ ವಿಭಾಗದ ಮುಖ್ಯಸ್ಥರಾದ ಡಾ.ವೈಶಾಲಿ ಸೋಲಾವ್ ಅವರು ಕರೋನಾ ಸ್ಟ್ರೈನ್ ಅನ್ನು ಗುರುತಿಸಲು ಆನುವಂಶಿಕ ಪರೀಕ್ಷೆಯ ಮೇಲೆ ಕೇಂದ್ರೀಕರಿಸಲು ಸಲಹೆ ನೀಡಿದರು.