ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 104 ಹೊಸ ಪ್ರಕರಣ ಪತ್ತೆಯಾಗಿದೆ.
ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 4,46,81,258ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30, 726ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,035ಕ್ಕೆ ಇಳಿಕೆ ಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 163 ಮಂದಿ ಗುಣಮುಖ ರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,48,472ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,17,56,888 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.