ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,97,037ಕ್ಕೆ ಏರಿಕೆ ಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,808ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,559ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,59,617ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 97,866 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,04,44,854 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,65,13,507 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.