ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 89 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 4,46,82,104ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,737ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,931ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 90 ಮಂದಿ ಗುಣಮುಖರಾಗುವು ದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,49,436ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,30,63,139 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.