Saturday, 23rd November 2024

ಕೋವಿಡ್‌: 5,676 ಪ್ರಕರಣ ಪತ್ತೆ

ವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 5,676 ಪ್ರಕರಣಗಳು ಪತ್ತೆಯಾಗಿವೆ.

ಹಿಂದಿನ ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು.

37,093 ರಷ್ಟು ಸಕ್ರಿಯ ಕೋವಿಡ್‌ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್‌ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿ ಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು.

ದೇಶದಲ್ಲಿ ಕೋವಿಡ್‌ ನಿರಂತರವಾಗಿ ಹೆಚ್ಚಳವಾಗುತ್ತಿರುವುದಕ್ಕೆ ಮೂರು ಮುಖ್ಯ ಕಾರಣ ಗಳನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಹಿರಂಗಪಡಿಸಿತ್ತು.