Sunday, 15th December 2024

ಕೋವಿಡ್‌: 9,111 ಹೊಸ ಪ್ರಕರಣ ಪತ್ತೆ

ವದೆಹಲಿ: ದೇಶದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೊಂಕು ದೃಢಪಟ್ಟ 9,111 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 60 ಸಾವಿರ ದಾಟಿದೆ. ಒಂದೇ ದಿನ 27 ಜನರು ಮೃತಪಟ್ಟಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 5,31,141ಕ್ಕೆ ಏರಿಕೆಯಾಗಿದೆ.

ಭಾನುವಾರ 10 ಸಾವಿರ ಪ್ರಕರಣಗಳು ವರದಿಯಾಗಿದ್ದವು. ಹಿಂದಿನ ದಿನಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.