Saturday, 23rd November 2024

10 ಸಾವಿರ ಹೊಸ ಕೋವಿಡ್‌ ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 10,000 ಕ್ಕೂ ಹೆಚ್ಚು ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 44,998 ಕ್ಕೆ ತಲುಪಿದೆ.

ದೇಶದಲ್ಲಿ 7,830 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಒಂದೇ ದಿನದಲ್ಲಿ ಹತ್ತು ಸಾವಿರ ದಾಟುತ್ತಿದ್ದಂತೆ ನಾಲ್ಕನೇ ಅಲೆ ತಲುಪುವ ಲಕ್ಷಣಗಳಿವೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಜನರಿಗೆ ಸೂಚಿಸಲಾಗಿದೆ. ಇನ್ನು 10-12 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ 5,356 ಜನರು ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ, ಇದುವರೆಗೆ 4,42,10,127 ಜನರು ಚೇತರಿಸಿಕೊಂಡಿ ದ್ದಾರೆ. ಕಳೆದ 24 ಗಂಟೆಗಳಲ್ಲಿ 10,158 ಹೊಸ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,29,958 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ವರೆಗೆ 92.34 ಕೋಟಿ ಜನರನ್ನು ಪರೀಕ್ಷಿಸಲಾಗಿದೆ. ದೇಶದಲ್ಲಿ ಇದುವರೆಗೆ 220.66 ಕೋಟಿ ಲಸಿಕೆ ಡೋಸ್ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 327 ಡೋಸ್ ಲಸಿಕೆ ನೀಡಲಾಗಿದೆ.