Sunday, 15th December 2024

2,380 ಜನರಲ್ಲಿ ಸೋಂಕು ದೃಢ

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,380 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 15 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,31,680 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 27,212 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,10,738 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 220,66,79,296 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,38,993 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.