ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,095 ಹೊಸ ಪ್ರಕರಣ ಗಳು ಪತ್ತೆಯಾಗಿವೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,15,787ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,867ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,208ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,69,711 ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 1,18,694 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,15,33,008 ಮಂದಿಯನ್ನು ಪರೀಕ್ಷೆ ಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,65,99,034 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.